ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 228 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,79,547ಕ್ಕೆ ಏರಿಕೆಯಾಗಿದೆ. ನಿನ್ನೆ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,714ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,79,547 ಮಂದಿ ಸೋಂಕಿತರ ಪೈಕಿ ಈವರೆಗೆ 4,41,46,330 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










