ದೇಶದಲ್ಲಿ 22,854 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆ…

88
Firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 22,854 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,12,85,561ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 126 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,58,189ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,12,85,561 ಮಂದಿ ಸೋಂಕಿತರ ಪೈಕಿ ಈವರೆಗೆ 1,09,38,146 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.