ದೇಶದಲ್ಲಿ 2,34,692 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆ…

122
Firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,34,692 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,341 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,75,649ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,45,26,609 ಮಂದಿ ಸೋಂಕಿತರ ಪೈಕಿ ಈವರೆಗೆ 1,26,71,220 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.