ದೇಶದಲ್ಲಿ 2,38,018 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,76,18,271ಕ್ಕೆ ಏರಿಕೆ…

67
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,38,018 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 310 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,86,761ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,76,18,271 ಮಂದಿ ಸೋಂಕಿತರ ಪೈಕಿ ಈವರೆಗೆ 3,53,94,882 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.