ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,57,299 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,62,89,290ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,194 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,95,525ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,62,89,290 ಮಂದಿ ಸೋಂಕಿತರ ಪೈಕಿ ಈವರೆಗೆ 2,30,70,365 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










