ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,041 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,36,78,786ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 276 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,47,194ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,36,78,786 ಮಂದಿ ಸೋಂಕಿತರ ಪೈಕಿ ಈವರೆಗೆ 3,29,31,972 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










