ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,110 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,57,72,440ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,874 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,87,122ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,57,72,440 ಮಂದಿ ಸೋಂಕಿತರ ಪೈಕಿ ಈವರೆಗೆ 2,23,55,440 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










