ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 294 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,69,715ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,591ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,69,715 ಮಂದಿ ಸೋಂಕಿತರ ಪೈಕಿ ಈವರೆಗೆ 4,41,32,915 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










