ದೇಶದಲ್ಲಿ 2,994 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,18,781ಕ್ಕೆ ಏರಿಕೆ…

65
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,994 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,18,781ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,876ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,47,18,781 ಮಂದಿ ಸೋಂಕಿತರ ಪೈಕಿ ಈವರೆಗೆ 4,41,71,551 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.