ದೇಶದಲ್ಲಿ 3,207 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,05,401ಕ್ಕೆ ಏರಿಕೆ…

62
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,207 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,05,401ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 29 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,093ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,31,05,401 ಮಂದಿ ಸೋಂಕಿತರ ಪೈಕಿ ಈವರೆಗೆ 4,25,60,905 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.