ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,23,144 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,771 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,97,894ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,76,36,307 ಮಂದಿ ಸೋಂಕಿತರ ಪೈಕಿ ಈವರೆಗೆ 1,45,56,209 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










