ದೇಶದಲ್ಲಿ 3,46,786 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆ…

116
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,46,786 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,624 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,89,544ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,66,10,481 ಮಂದಿ ಸೋಂಕಿತರ ಪೈಕಿ ಈವರೆಗೆ 1,38,67,997 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.