ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,079 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,10,64,908ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 560 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,13,091ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,10,64,908 ಮಂದಿ ಸೋಂಕಿತರ ಪೈಕಿ ಈವರೆಗೆ 3,02,27,792 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










