ದೇಶದಲ್ಲಿ 3,82,315 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆ…

112
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,82,315 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,780 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,26,188ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,06,65,148 ಮಂದಿ ಸೋಂಕಿತರ ಪೈಕಿ ಈವರೆಗೆ 1,69,51,731 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.