ದೇಶದಲ್ಲಿ 39,726 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,15,14,331ಕ್ಕೆ ಏರಿಕೆ…

101
Firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39,726 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,15,14,331ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 154 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,59,370ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,15,14,331 ಮಂದಿ ಸೋಂಕಿತರ ಪೈಕಿ ಈವರೆಗೆ 1,10,83,679 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.