ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,194 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,84,261ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 255 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,15,714ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,29,84,261 ಮಂದಿ ಸೋಂಕಿತರ ಪೈಕಿ ಈವರೆಗೆ 4,24,26,328 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










