ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,766 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,07,95,716ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,206 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,07,145ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,07,95,716 ಮಂದಿ ಸೋಂಕಿತರ ಪೈಕಿ ಈವರೆಗೆ 2,99,33,538 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










