ದೇಶದಲ್ಲಿ 5000ದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ-ಈವರೆಗೆ 149 ಮಂದಿ ಬಲಿ…

176
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 773 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಲ್ಲದೇ ಕೊರೊನಾ ಸೋಂಕಿತರ ಸಂಖ್ಯೆ 5000ದ ಗಾಡಿ ದಾಟಿದ್ದು, ಈವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ 149ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು 4,643 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,194ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ ತಿಳಿದು ಬಂದಿದೆ. ಮಹಾರಾಷ್ಟ್ರದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,018 ಕ್ಕೆ ಏರಿಕೆಯಾಗಿದ್ದು, ಈವರೆಗೆ ಮಹಾರಾಷ್ಟ್ರದಲ್ಲಿ 64ಮಂದಿ ಮೃತಪಟ್ಟಿದ್ದಾರೆ. ಹಾಗೂ ತಮಿಳುನಾಡು-690, ನವದೆಹಲಿಯಲ್ಲಿ-576, ತೆಲಂಗಾಣದಲ್ಲಿ-364 ಕೇರಳದಲ್ಲಿ-336 ಹಾಗೂ ಕರ್ನಾಟಕದಲ್ಲಿ ಒಟ್ಟು 175 ಕೊರೊನಾ ಪ್ರಕರಣಗಳು ವರದಿಯಾಗಿದೆ.