ದೇಶದಲ್ಲಿ 5,233 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,90,282ಕ್ಕೆ ಏರಿಕೆ…

69
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,233 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,90,282ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,715ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,31,90,282 ಮಂದಿ ಸೋಂಕಿತರ ಪೈಕಿ ಈವರೆಗೆ 4,26,36,710 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.