ದೇಶದಲ್ಲಿ 53,480 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,21,49,335ಕ್ಕೆ ಏರಿಕೆ…

120
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 53,480 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,21,49,335ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 354 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,62,468ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,21,49,335 ಮಂದಿ ಸೋಂಕಿತರ ಪೈಕಿ ಈವರೆಗೆ 1,14,34,301 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.