ದೇಶದಲ್ಲಿ 62,224 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,96,33,105ಕ್ಕೆ ಏರಿಕೆ…

72
Firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62,224 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,96,33,105ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,542 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,79,573 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,96,33,105 ಮಂದಿ ಸೋಂಕಿತರ ಪೈಕಿ ಈವರೆಗೆ 2,83,88,100 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.