ದೇಶದಲ್ಲಿ 6,904 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,98,893ಕ್ಕೆ ಏರಿಕೆ…

57
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,904ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,98,893ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 8ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,345ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,48,98,893 ಮಂದಿ ಸೋಂಕಿತರ ಪೈಕಿ ಈವರೆಗೆ 4,43,01,865ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.