ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,915 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,29,31,045ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 180 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,14,023ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,29,31,045 ಮಂದಿ ಸೋಂಕಿತರ ಪೈಕಿ ಈವರೆಗೆ 4,23,24,550 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










