ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 702 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,10,891ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,346ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,10,891 ಮಂದಿ ಸೋಂಕಿತರ ಪೈಕಿ ಈವರೆಗೆ 4,44,73,448 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










