ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,633 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,34,859ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,152ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,48,34,859 ಮಂದಿ ಸೋಂಕಿತರ ಪೈಕಿ ಈವರೆಗೆ 4,42,42,474 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










