ದೇಶದಲ್ಲಿ 81,466 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆ…

122
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 81,466 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 469 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,63,396ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,23,03,131 ಮಂದಿ ಸೋಂಕಿತರ ಪೈಕಿ ಈವರೆಗೆ 1,15,25,039 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.