ದೇಶದಲ್ಲಿ 8,329 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,32,13,435ಕ್ಕೆ ಏರಿಕೆ…

55
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,329 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,32,13,435ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,757ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,32,13,435 ಮಂದಿ ಸೋಂಕಿತರ ಪೈಕಿ ಈವರೆಗೆ 4,26,48,308 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.