ದೊಡ್ಡಬಳ್ಳಾಪುರ : ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ…

11
firstsuddi

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ದೊಡ್ಡಬಳ್ಳಾಪುರ ತಾಲೂಕಿನ ಬೀಡಿಕೆರೆ ಗ್ರಾಮದ ಆರು ವರ್ಷದ ಬಾಲಕಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.

ಗ್ರಾಮದ ಮುನಿರಾಜು ಮತ್ತು ಸವಿತಾ ದಂಪತಿಯ ಪುತ್ರಿ ಚಾರುಲತಾ (6) ಮೃತ ಬಾಲಕಿ. ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಚಾರುಲತಾಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.