ಆಲ್ದೂರು : ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಮೇಘನ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಉಪಾಧ್ಯಕ್ಷರಾಗಿದ್ದ ರಂಜಿತ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೇಘನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೇಘನ ತನಗೆ ಸಿಕ್ಕಿರುವ ಅವಕಾಶ ಬಳಸಿಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಮೂಲಭೂತ ಸೌಲಭ್ಯ ದೊರಕಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ, ನಿರ್ಗಮಿತ ಉಪಾಧ್ಯಕ್ಷರಾದ ರಂಜಿತ್, ಎಪಿಎಂಸಿ ಮಾಜಿ ಅಧ್ಯಕ್ಷ ಕವೀಶ್, ತಾ.ಪಂ. ಮಾಜಿ ಸದಸ್ಯೆ ಭವ್ಯ ನಟೇಶ್, ಜೆಡಿಎಸ್ ಹೋಬಳಿ ಅಧ್ಯಕ್ಷ ಪ್ರವೀಣ್ ಇನ್ನಿತರರು ಉಪಸ್ಥಿತರಿದ್ದರು.










