ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ…

56
firstsuddi

ಬೆಂಗಳೂರು : 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ ಅವಕಾಶ ನೀಡಲಾಗಿದೆ. ಇತ್ತ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೂ ದಿನಾಂಕ ನಿಗದಿ ಮಾಡಲಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ:
ಏ.16- ಗಣಿತ, ಶಿಕ್ಷಣ, ಬೇಸಿಕ್ ಗಣಿತ, ಏ.18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ.19– ಹೆಲ್ತ್ ಕೇರ್, ರೀಟೇಲ್, ಇನ್ಫಾರ್ಮೇಶನ್ ಟೆಕ್ನಾಲಜಿ, ಏ.20- ಇತಿಹಾಸ, ಭೌತಶಾಸ್ತ್ರ, ಏ.21– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್, ಏ.22– ಲಾಜಿಕ್, ಬ್ಯುಸಿನೆಸ್ ಸ್ಟಡೀಸ್, ಏ.23- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಏ.25- ಅರ್ಥಶಾಸ್ತ್ರ, ಏ.26- ಹಿಂದಿ, ಏ.28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಏ.29- ಕನ್ನಡ, ಏ.30– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ.2-ಭೂಗೋಳಶಾಸ್ತ್ರ, ಜೀವಶಾಸ್ತ್ರ, ಮೇ.4- ಇಂಗ್ಲಿಷ್.