ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ – ಹಿಜಾಬ್‍ಗೆ ಅವಕಾಶ ಇಲ್ಲ…

59
firstsuddi

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗೆ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿಯೇ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಶಾಲಾ-ಕಾಲೇಜ್ ಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿಹಿಡಿದಿತ್ತು. ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ಸರ್ಕಾರಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿಯೇ ಹಾಜರಾಗಬೇಕು ಹಾಗೂ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಆಯಾ ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಮತ್ತೆ ಪರಿಷ್ಕರಣೆಗೊಂಡಿದೆ. ಇದೀಗ ಅಂತಿಮ ವೇಳಾಪಟ್ಟಿಯನ್ನು ಪಿಯುಸಿ ಬೋರ್ಡ್ ಪ್ರಕಟಿಸಿದೆ. ಏಪ್ರಿಲ್ 22 ರಿಂದ ಮೇ 18ರ ವರೆಗೆ ಪರೀಕ್ಷೆಗಳು ನಡೆಯಲಿದೆ.

ಪರಿಷ್ಕೃತ ವೇಳಾಪಟ್ಟಿ ಇಂತಿದೆ :
ಏಪ್ರಿಲ್ 22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್ 26- ರಸಾಯನಶಾಸ್ತ್ರ, ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28- ಕನ್ನಡ, ಅರೇಬಿಕ್
ಮೇ 4- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 5- ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮೇ 6- ಇಂಗ್ಲಿಷ್
ಮೇ 10- ಇತಿಹಾಸ, ಭೌತಶಾಸ್ತ್ರ
ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18- ಹಿಂದಿ