ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ-ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ…

142
firstsuddi

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬರಲಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ಕಳೆದ ವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ ಅದಕ್ಕೂ ಮುಂಚಿತವಾಗಿಯೇ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 90.71 ಶೇ. ಫಲಿತಾಂಶ ಪಡೆಯುವ ಮೂಲಕ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಈ ಬಾರಿ ದ್ವಿತೀಯ 3,84,947 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೆ. 68.73ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ. 54.77ರಷ್ಟು ಬಾಲಕರು ಉತ್ತೀರ್ಣರಾಗಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಶೇ. 61.80 ರಷ್ಟು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗ-ಶೇ. 76.2, ವಾಣಿಜ್ಯ ವಿಭಾಗ-ಶೇ. 65.52 ಹಾಗೂ ಕಲಾ ವಿಭಾಗದಲ್ಲಿ ಶೇ. 41.27ರಷ್ಟು ಫಲಿತಾಂಶ ಬಂದಿದೆ ಎಂದು ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.