ಮನೆಯ ಮೇಲೆ ಕುಸಿದ ಕಾಂಪೌಂಡ್ ಗೋಡೆ ; ಅಣ್ಣ-ತಂಗಿ ಬಲಿ!

144
firstsuddi

ನೆಲಮಂಗಲ :  ಧಾರಾಕಾರ ಸುರಿದ ಮಳೆಗೆ ಮನೆಯ ಮೇಲೆ ಕಾಂಪೌಂಡ್ ಗೋಡೆ ಕುಸಿದು  ಅಣ್ಣ, ತಂಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. 

ಮೃತರನ್ನು ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22) ಎಂದು ಗುರುತಿಸಲಾಗಿದೆ. ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ, ಪಕ್ಕದಲ್ಲಿ ಇದ್ದ ಮನೆಯ ಮೇಲೆ ಕುಸಿದಿದೆ. ಪರಿಣಾಮ ಮನೆಯಲ್ಲಿ ಮಲಗಿದ್ದ ಕಾವ್ಯ ಹಾಗೂ ವೇಣುಗೋಪಾಲ್ ಸ್ಥಳದಲ್ಲೇ ಮೃತಪಟ್ಟರೆ ಸಂಪ್ರಥ್ (22) ಎಂಬ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ ಸಂಪ್ರಥ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವಶೇಷಗಳ ಸಿಲುಕಿದ್ದ ಇಬ್ಬರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಕುಮಾರ್ ಅವರು ಪರಿಶೀಲನೆ ನಡೆಸಿ ಜಮೀನು ಮಾಲೀಕನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.