ಧಾರಾಕಾರ ಮಳೆ ; ಚಾಮರಾಜನಗರ ಶಾಲಾ-ಕಾಲೇಜುಗಳಿಗೆ ರಜೆ…

88
firstsuddi

ಚಾಮರಾಜನಗರ : ನಿನ್ನೆ ರಾತ್ರಿಯಿಂದ ಆರಂಭವಾದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಎಡ ಬಿಡದೇ ಮಳೆ ಸುರಿಯುತ್ತಿರುವ ಹಿನ್ನೆಲೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ಒಂದನೇ ತರಗತಿಯಿಂದ ಪದವಿ ಕಾಲೇಜಿನವರೆಗೆ ಡಿಸಿ ಚಾರುಲತಾ ಸೋಮಲ್ ರಜೆ ಘೋಷಿಸಿದ್ದಾರೆ.

ಇನ್ನೊಂದೆಡೆ ರಾಮನಗರ ಜಿಲ್ಲಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಮನಗರ, ಚನ್ನಪಟ್ಟಣ, ಕನಕಪುರದ ಸರ್ಕಾರಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಐ ಗಂಗಣ್ಣಸ್ವಾಮಿ ಆದೇಶ ಹೊರಡಿಸಿದ್ದಾರೆ. ಹಾಗೆಯೇ, ಜಿಲ್ಲೆಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಕೂಡ ರಜೆ ಘೋಷಣೆ ಮಾಡಿದೆ.