ಧಾರಾಕಾರ ಮಳೆ – ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ…

71
firstsuddi

ಮೈಸೂರು : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.

ಕಳೆದ ತಿಂಗಳು ನಂದಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತ್ತು.‌ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಅವರು ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ ಈಗ ಬೆಟ್ಟದಲ್ಲಿ ಮತ್ತೆ ಭೂಕುಸಿತವಾಗಿದ್ದು, ಸ್ಥಳೀಯರಲ್ಲಿ ಆತಂಕ ಎದುರಾಗಿದೆ.

ಚಾಮುಂಡಿ ಬೆಟ್ಟದ ನಂದಿ ಮಾರ್ಗದ ರಸ್ತೆಯಲ್ಲಿ 3 ಬಾರಿ ಭೂ ಕುಸಿತ ಸಂಭವಿಸಿದೆ. ಚಾಮುಂಡಿ ಬೆಟ್ಟದಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿ, ಮರಗಳ ನಾಶ, ನಿರ್ವಹಣೆ ವೈಫಲ್ಯ ಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ.