ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು…

55
firstsuddi

ಮಂಗಳೂರು : ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕರೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ನಡೆದಿದೆ.

ಗಂಗಾಧರ ಗೌಡ ಮೃತಪಟ್ಟ ನಿವೃತ್ತ ಸೈನಿಕ. ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ಧ್ವಜಾರೋಹಣ ನೆರವೇರಿಸುವ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.