ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ನಾರಾಯಣ ಹೃದಯಾಲಯ ತಜ್ಞರು ತಿಳಿಸಿದ್ದಾರೆ.
ನಂದಮೂರಿ ತಾರಕರತ್ನ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದೆ.
ತೀವ್ರ ಹೃದಯಘಾತವಾಗಿರುವ ಹಿನ್ನೆಲೆಯಲ್ಲಿ ಹೃದಯದ ರಕ್ತನಾಳಗಳು ಬ್ಲಾಕ್ ಆಗಿವೆ. ಇದ್ದರಿಂದ ತಾರಕರತ್ನ ಅವರ ಆರೋಗ್ಯ ಸ್ಥಿತಿ ಕೊಂಚ ಗಂಭೀರವಾಗಿದೆ. ಇಂಟ್ರಾ ಅಯೋರ್ಟಿಕ್ ಪಂಪ್ (ಎಬಿಪಿ) ಹಾಗೂ ವ್ಯಾಸೋ ಆ್ಯಕ್ಟಿವ್ ನೆರವಿನಿಂದ ಚಿಕಿತ್ಸೆ ನೀಡಲಾಗಿದೆ. ಆ್ಯಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ. ಆದ್ರೆ, ಸ್ಟಂಟ್ ಅಳವಡಿಕೆ ನಡುವೆಯೂ ರಕ್ತಸ್ರಾವ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ನುರಿತ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ನಂದಮೂರಿ ತಾರಕರತ್ನ ಅವರಿಗೆ ನಿನ್ನೆ ತೀವ್ರ ಹೃದಯಾಘಾತವಾಗಿತ್ತು, ಕೂಡಲೇ ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗಿದ್ದು, ನಾರಾಯಣ ಹೃದಯಾಲಯ ಆಸ್ಪತ್ರೆಯ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.










