ನಂದಮೂರಿ ತಾರಕ ರತ್ನ ತೀವ್ರ ಅಸ್ವಸ್ಥ – ಆಸ್ಪತ್ರೆಗೆ ದಾಖಲು…

27
firstsuddi

ಟಾಲಿವುಡ್ ನಟ ನಂದಮೂರಿ ತಾರಕ ರತ್ನ ಅವರು ಪಾದಯಾತ್ರೆ ವೇಳೆ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದಾರೆ. ಸದ್ಯ ನಟನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಪಾದಯಾತ್ರೆಯಲ್ಲಿ ನಂದಮೂರಿ ತಾರಕ ರತ್ನ ಅವರು ಭಾಗವಹಿಸಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ. ಸದ್ಯ ಕುಪ್ಪಂನ ಖಾಸಗಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆತರುವ ಸಾದ್ಯತೆ ಇದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ತಾರಕ ರತ್ನ ಅವರ ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾರಕ ರತ್ನ ಆರೋಗ್ಯದ ಕುರಿತು ಅವರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.