ನವದೆಹಲಿ: ಕೆಎಂಎಫ್ ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಯಲ್ಲಿ ಹೇಳಿದ್ದಾರೆ.
ಅಮುಲ್ ಉತ್ಪನ್ನಗಳು ಬೆಂಗಳೂರಿನಲ್ಲಿ ಮಾರಾಟವಾಗುವ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಅಮುಲ್ ಬ್ರ್ಯಾಂಡ್ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮುಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಬಂದಿದೆ.










