ಬೆಂಗಳೂರು: ಕೊರೊನಾ ಕರ್ಫ್ಯೂ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳಾದ ನಂದಿನ ಹಾಲಿನ ಮಾರಾಟ ಮಳಿಗೆಗಳನ್ನು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತೆರೆದಿಡಲು ಅವಕಾಶ ನೀಡಲಾಗಿದ್ದು, ಶುಕ್ರವಾರದಿಂದ ಕರ್ನಾಟಕ ಹಾಲು ಒಕ್ಕೂಟದ ನಂದಿನ ಹಾಲು ಮಾರಾಟ ಮಳಿಗೆಗಳು ಬೆಳಿಗ್ಗೆ 06:00ಗಂಟೆಯಿಂದ ರಾತ್ರಿ 08:00ಗಂಟೆಯವರೆಗೆ ಮಾರಾಟ ಮಾಡಲು ಸರಕಾರ ಅನುಮತಿಸಿದೆ.
ಈ ಆದೇಶವನ್ನು ಮುಖ್ಯ ಆಯುಕ್ತರು, ಬಿಬಿಎಂಪಿ, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.










