ನಂದಿನ ಹಾಲಿನ ದರ 3 ರೂ.ಗೆ ಹೆಚ್ಚಿಸಲು ಕೆಎಂಎಫ್ ನಿರ್ಧಾರ…

32
firstsuddi

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ರೋಸಿ ಹೋಗಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಿಸಲು ಕೆಎಂಎಫ್ ನಿರ್ಧರಿಸಿದೆ.

ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿನಿಂದ ಕೆಎಂಎಫ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದೆ. ಆದರೆ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಸರ್ಕಾರವು ಅನುಮೋದನೆ ನೀಡದಿದ್ದರೂ, ತಮ್ಮ ಅಧಿಕಾರ ಬಳಸಿಕೊಂಡು ಕೆಎಂಎಫ್ ಅಧ್ಯಕ್ಷರು ಹಾಲಿನ ದರ ಏರಿಕೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ನಗರದಲ್ಲಿ ಕಳೆದ ಶುಕ್ರವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಎಂಎಫ್ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಕೆಎಂಎಫ್ ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ವ್ಯಕ್ತಪಡಿಸಿವೆ ಎಂದು ಹೇಳಲಾಗಿದೆ.