ನಕ್ಸಲರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ-ಸಿಆರ್‌ಪಿಎಫ್ ಯೋಧ ಹುತಾತ್ಮ…

219
firstsuddi

ಛತ್ತೀಸ್‌ಘಡ : ನಕ್ಸಲರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಸಿಆರ್‌ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಛತ್ತೀಸ್‌ಘಡದ ಬಿಜಾಪೂರ್ ಜಿಲ್ಲೆಯ ತಂಗುದಾ-ಪಮೇದ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ 4ಗಂಟೆ ಸುಮಾರಿಗೆ ಸಿಆರ್‌ಪಿಎಫ್‌ನ 151 ಬೆಟಾಲಿಯನ್ ಯೋಧರು, ಕೋಬ್ರಾ ಕಮಾಂಡರ್ ಹಾಗೂ ಛತ್ತೀಸ್‌ಘಡದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು, ಓರ್ವ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ ಎನ್ನಲಾಗಿದೆ.