ನಗ್ನವಾಗಿ ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಆತ್ಮಹತ್ಯೆ…

48
firstsuddi

ಧಾರವಾಡ : ಕೃಷಿ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ತನ್ನ ವಸತಿ ನಿಲಯದಲ್ಲಿ ನಗ್ನವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 

ರೋಹಿತ್ ಸಿ.ಪಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಮೆಸ್ ನಲ್ಲಿ ಊಟ ಮಾಡಿದ ಈತ, ನಂತರ ಹಾಸ್ಟೆಲ್ ರೂಂಗೆ ಹೋಗಿದ್ದಾನೆ. ಆತನ ಗೆಳೆಯರು ಹಾಗೂ ಕುಟುಂಬದವರು ಎಷ್ಟೇ ಮೊಬೈಲ್ ಕರೆ ಮಾಡಿದರೂ ಆತ ಕರೆ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಿಟಕಿಯಿಂದ ಓರ್ವ ವಿದ್ಯಾರ್ಥಿ ನೋಡಿದಾಗ ರೋಹಿತ್ ಹಾಸ್ಟೆಲ್ ರೂಂನಲ್ಲಿ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.

ತಕ್ಷಣ ಹಾಸ್ಟೆಲ್ ವಾರ್ಡನ್ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಪೊಲೀಸರಿಗೆ ಹಾಗೂ ವಿದ್ಯಾರ್ಥಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ವಿದ್ಯಾರ್ಥಿ ಪೋಷಕರು ತಡ ರಾತ್ರಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಿಂದ ಧಾರವಾಡಕ್ಕೆ ಆಗಮಿಸಿದ ನಂತರ ಶವ ಕೆಳಗೆ ಇಳಿಸಿ ಆಸ್ಪತ್ರೆಗೆ ಕಳಿಸಲಾಯಿತು. ಪೊಲೀಸರು ವಿದ್ಯಾರ್ಥಿಯ ಮೊಬೈಲ್ ಅನ್ನು ವಶಕ್ಕೆ ಪಡದಿದ್ದಾರೆ. ನಗ್ನವಾಗಿ ಈ ವಿದ್ಯಾರ್ಥಿ ಏಕೆ ನೇಣು ಹಾಕಿಕೊಂಡ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.