ನಟಿ ಶಿಲ್ಪಾ ಶೆಟ್ಟಿ ಮನೆಯಲ್ಲಿ ಕಳ್ಳತನ – ಇಬ್ಬರ ಬಂಧನ…

66
firstsuddi

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಕಳೆದ ವಾರ ಜುಹುದಲ್ಲಿರುವ ನಟಿಯ ನಿವಾಸದಿಂದ ಕೆಲವು ಬೆಲೆಬಾಳುವ ವಸ್ತುಗಳು ಕಳುವಾಗಿದ್ದವು. ಜುಹು ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲು ಮಾಡಲಾಗಿತ್ತು. ಪ್ರಕರಣ ಸಂಬಂಧ ಸದ್ಯಕ್ಕೆ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದು, ಬಂಧಿತರ ವಿಚಾರಣೆ ನಡೆಯುತ್ತಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜೋಗಿಪ್ರೇಮ್ ನಿರ್ದೇಶಿಸುತ್ತಿರುವ ಕನ್ನಡ ‘ಕೇಡಿ’ ಸಿನಿಮಾದಲ್ಲಿ ರಾಣಿ ಸತ್ಯವತಿ ಪಾತ್ರದಲ್ಲಿ ನಟಿ ಶಿಲ್ಪಾ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. 17 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ಅವರು ಕನ್ನಡ ಸಿನಿಮಾರಂಗಕ್ಕೆ ಮರಳಿದ್ದಕ್ಕೆ ಕನ್ನಡಿಗರೂ ಖುಷಿ ವ್ಯಕ್ತಪಡಿಸಿದ್ದರು.