ಉಪೇಂದ್ರ ಆಸ್ಪತ್ರೆಗೆ ದಾಖಲು – ನಾನು ಆರೋಗ್ಯವಾಗಿದ್ದೇನೆ ಎಂದ ನಟ

21
firstsuddi

ನಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ನೆಲಮಂಗಲದ ಮೋಹನ್ ಬಿಕರೆ ಸ್ಟುಡಿಯೋದಲ್ಲಿ ಯು ಅಂಡ್ ಐ ಸಿನಿಮಾ ಶೂಟಿಂಗ್ ನಲ್ಲಿ ಚಿತ್ರತಂಡ ಬ್ಯುಸಿಯಾಗಿತ್ತು. ಉಪೇಂದ್ರ ಅವರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ. ಉಪೇಂದ್ರ ಅವರನ್ನು ನೆಲಮಂಗಲದ ಹರ್ಷ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಕೊಡಿಸಿದ ಬಳಿಕ ಉಪೇಂದ್ರ ಸುಧಾರಿಸಿಕೊಂಡಿದ್ದು, ಕೆಲ ಹೊತ್ತು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದಿದ್ದಾರೆ. ನಂತರ ಮತ್ತೆ ಶೂಟಿಂಗ್ ಸ್ಥಳಕ್ಕೆ ಬಂದು, ಎಂದಿನಂತೆ ಕೆಲಸದಲ್ಲಿ ತೊಡಗಿದ್ದಾರೆ.

ಚಿತ್ರೀಕರಣದ ಸ್ಥಳದಿಂದಲೇ ಫೇಸ್ ಬುಕ್ ಲೈವ್ ಗೆ ಬಂದ ಉಪೇಂದ್ರ, ನಾನು ಶೂಟಿಂಗ್ ಸ್ಪಾಟ್ ನಲ್ಲಿ ಇದ್ದೇನೆ. ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.