ನಟ ಚೇತನ್ ಕುಮಾರ್ ಗೆ ನೋಟಿಸ್ ; ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ…

103
firstsuddi

ಬೆಂಗಳೂರು : ಬ್ರಾಹ್ಮಣರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿಗೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್ ಗೆ ನೋಟಿಸ್ ನೀಡಿದ್ದಾರೆ.

ಬ್ರಾಹ್ಮಣ ಹಾಗೂ ಬ್ರಾಹ್ಮಣ್ಯದ ವಿರುದ್ದ ನಟ ಚೇತನ್ ಅವರು ಫೇಸ್ಬುಕ್, ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ವಿಪ್ರ ಯುವ ವೇದಿಕೆಯ ಅಧ್ಯಕ್ಷ ಪವನ್ ಕುಮಾರ್ ಅವರು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ್ವಯ ಬಸವನಗುಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಹಿನ್ನೆಲೆ ನಟ ಚೇತನ್ ಗೆ ಪೋಸ್ಟ್ ಮಾಡಿರುವ ವಿಡಿಯೋ ಮತ್ತು ಪೋಸ್ಟ್  ಬಗ್ಗೆ ಸ್ಪಷ್ಟ ಮಾಹಿತಿ ನೀಡಿ ಎಂದು ಪೊಲೀಸರು ನೋಟಿಸ್ ನೀಡಿದ್ದು, ಇಂದು ವಿಚಾರಣೆಗಗೆ ಹಾಜರಾಗುವಂತೆ ಸೂಚಿಸಿದ್ದಾರೆ.