ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಕೋರ್ಟ್ಗೆ ಹಾಜರಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಲಿದೆ. ಈ ಕಾರಣಕ್ಕೆ ಖುದ್ದು ಹಾಜರಾಗಬೇಕೆಂದು ಸೂಚನೆ ಇರುವ ಕಾರಣ ಸಿಸಿಎಚ್ 57ರ ಕೋರ್ಟ್ಗೆ ಎಲ್ಲಾ 17 ಆರೋಪಿಗಳು ಹಾಜರಾಗಿದ್ದಾರೆ. ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ನಂತರ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿ ಆದೇಶಿಸಿದರು. ಜಾಮೀನು ಸಿಕ್ಕಿದರೂ ಇಲ್ಲಿಯವರೆಗೆ ಪವಿತ್ರಾಗೌಡ ಹಾಗೂ ದರ್ಶನ್ ಭೇಟಿಯಾಗಿರಲಿಲ್ಲ. ಫೆ.25ರಂದು ಮತ್ತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ಈ ಹಿಂದೆ ಕೋರ್ಟ್ ವಿಚಾರಣೆಯ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಮುಖಿಯಾಗಿದ್ದೇ ಕೊನೆ. ಅದಾದ ನಂತರ ದರ್ಶನ್ ಹಾಗೂ ಪವಿತ್ರಾ ದೂರವಾಗಿದ್ದರು.










