ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ನನ್ನು ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯಾ ಹಾಗೂ ಭಾವ ಸೇರಿ ಕುಟುಂಬ ಸದಸ್ಯರು ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಗನ ಸ್ಥಿತಿ ಕಂಡು ತಾಯಿ ಕಣ್ಣಿರು ಹಾಕಿದ್ದು, ದರ್ಶನ್ ಸಮಾಧಾನಮಾಡಿದ್ದಾರೆ. ನಗರದ ಕೇಂದ್ರ ಕಾರಾಗೃಹದಲ್ಲಿರುವ ದರ್ಶನ್ರನ್ನು ನೋಡಲು ತಾಯಿ ಮೀನಾ ಇದೇ ಮೊದಲ ಬಾರಿಗೆ ಜೈಲಿಗೆ ಆಗಮಿಸಿದ್ದರು. ಅಕ್ಕ ದಿವ್ಯಾ, ಭಾವ ಮಂಜುನಾಥ್, ಅಕ್ಕನ ಮಕ್ಕಳಾದ ರವಿಚಂದ್ರ, ಇಂದ್ರಕುಮಾರ್ ನಟನ ಆರೋಗ್ಯ ವಿಚಾರಿಸಿದರು. ಸುಮಾರು 20 ನಿಮಿಷಗಳ ಕಾಲ ಕುಟುಂಬ ಸದಸ್ಯರೊಂದಿಗೆ ದರ್ಶನ್ ಮಾತನಾಡಿದರು.
ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ಅವರನ್ನು ಭೇಟಿ ಮಾಡೋಕೆ ಅವರ ತಾಯಿ ಬಂದಿರಲಿಲ್ಲ. ಆದರೆ ಈಗ ಕೊನೆಗೂ ದರ್ಶನ್ ಭೇಟಿಗೆ ತಾಯಿ ಮೀನಾ ತೂಗುದೀಪ ಬಳ್ಳಾರಿ ಜೈಲಿಗೆ ಬಂದಿದ್ದಾರೆ. ದರ್ಶನ್ ಭೇಟಿಯಾಗೋಕೆ ಪತ್ನಿ ವಿಜಯಲಕ್ಷ್ಮಿ ಅವರು ಭೇಟಿ ಕೊಡುತ್ತಿದ್ದರೂ ಕೂಡಾ ಬೇರೆ ಯಾರೂ ಕೂಡಾ ಅಷ್ಟು ಸುಲಭವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಬೆಂಗಳೂರಿನಿಂದ ಬಳ್ಳಾರಿ ಜೈಲು ದೂರ ಇರುವ ಕಾರಣ ದರ್ಶನ್ ಅವರನ್ನು ಭೇಟಿ ಮಾಡುವುದು ಅವರ ಕುಟುಂಬಸ್ಥರಿಗೂ ಸಮಸ್ಯೆಯಾಗಿದೆ. ಹೀಗಿದ್ದರೂ ಕೂಡಾ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ನಿಯಮಿತವಾಗಿ ಬಂದು ಪತಿಯನ್ನು ಭೇಟಿ ಮಾಡಿ ಹೋಗುತ್ತಿದ್ದಾರೆ.
ಇನ್ನೂ ದರ್ಶನ್ ನೋಡಲು ಮೊನ್ನೆಯಷ್ಟೇ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಬರುವಾಗ ದರ್ಶನ್ ಗಾಗಿ ಹೊಸ ಬಟ್ಟೆಯನ್ನ ತಂದಿದ್ದರು. ಇದೀಗ ದರ್ಶನ್ ನೋಡಲು ಬಂದ ವೇಳೆ ತಾಯಿ ಮೀನು ತೂಗುದೀಪ ಮತ್ತು ಕುಟುಂಬಸ್ಥರು ಕೈಯಲ್ಲಿ ಎರಡು ಬ್ಯಾಗ್ ತಂದಿದ್ದಾರೆ. ಸ್ವೀಟ್ಸ್, ಊಟದ ಬಾಕ್ಸ್, ಹಣ್ಣು ತಂದಿದ್ದಾರೆ.
ದರ್ಶನ್ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಗೆಳತಿ ಪವಿತ್ರಾಗೆ ಕೆಟ್ಟದಾಗಿ ಮೆಸೇಜ್ ಮಾಡಿದ ರೇಣುಕಾಸ್ವಾಮಿ ಅನ್ನೋ ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ ಆರೋಪದಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ. ಜೂನ್ 9ರಂದು ರೇಣುಕಾಸ್ವಾಮಿ ಬಾಡಿ ಸಿಕ್ಕಿತ್ತು ಜೂನ್ 11ರಂದು ಈ ಕೊಲೆಯಲ್ಲಿ ದರ್ಶನ್ ಕೈವಾಡ ಇರೋದನ್ನ ಖಚಿತಪಡಿಸಿಕೊಂಡು ಬಂಧಿಸಲಾಗಿತ್ತು. ಅಲ್ಲಿಂದ ದರ್ಶನ್ ಅರೆಸ್ಟ್ ಆಗಿ ಇಂದಿಗೆ 100 ದಿನಗಳು ತುಂಬಿವೆ.










