ನಟ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಪ್ರಜ್ವಲ್ ಗೆ ಕೊರೊನಾ ಪಾಸಿಟಿವ್…

167
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ಹಾಗೂ ಪತ್ನಿ ರಾಗಿಣಿ ಪ್ರಜ್ವಲ್ ಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ.

ಇಬ್ಬರಿಗೂ ಕೊರೊನಾ ಸೋಂಕು ತಗುಲಿದ್ದು, ಕೊರೊನಾ ಪರೀಕ್ಷೆಗೂ ಒಳಗಾಗಿದ್ದೇವೆ. ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳುತ್ತಿದ್ದೇವೆ, ಯಾರೂ ಕೂಡ ಆತಂಕಕ್ಕೊಳಗಾಗಬೇಡಿ. ನಿಮ್ಮ ಪ್ರೀತಿ, ಕಾಳಜಿಗೆ ಧನ್ಯವಾದ ಎಂದು ನಟ ಪ್ರಜ್ವಲ್ ದೇವರಾಜ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.