ನಟ ಯಶ್ ಭೇಟಿಯಾದ ಕ್ರಿಕೆಟಿಗ ದಿನೇಶ್ ಕಾರ್ತಿಕ್.

32
firstsuddi

ಭಾರತ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಅವರು ಇತ್ತೀಚೆಗಷ್ಟೇ ನಟ ಯಶ್ ಅವರನ್ನು ಭೇಟಿಯಾಗಿದ್ದಾರೆ. ಅವರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ತಮ್ಮ ಹಾಗೂ ನಟ ಯಶ್ ರ ಫೋಟೋಗೆ ‘ಸಲಾಂ ರಾಕಿ ಭಾಯ್’ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.

ದಿನೇಶ್ ಕಾರ್ತಿಕ್ ಮಾತ್ರ ಅಲ್ಲದೆ ಕೆಲವು ದಿನಗಳ ಹಿಂದೆ ಮುಂಬೈ ಇಂಡಿಯನ್ಸ್ ತಂಡದ ಹಾರ್ದಿಕ್ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್ ಪಾಂಡ್ಯ ಕೂಡ ನಟ ಯಶ್ ಅವರನ್ನು ಭೇಟಿಯಾಗಿದ್ದರು. ಆ ಫೋಟೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

‘ಕೆಜಿಎಫ್ 2’ ಬಳಿಕ ಇನ್ನೂ ಯಾವ ಸಿನಿಮಾವನ್ನು ಘೋಷಿಸದಿರುವ ಯಶ್ ಅವರ ನಡೆ ಕುತೂಹಲ ಮೂಡಿಸಿದೆ. ತಮ್ಮ ಮುಂದಿನ ಸಿನಿಮಾಕ್ಕಾಗಿ ಅವರು ಭರ್ಜರಿ ಯೋಜನೆ ರೂಪಿಸುತ್ತಿದ್ದಾರೆ. ಆದಷ್ಟು ಬೇಗ ಅಪ್ ಡೇಟ್ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.